ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಮನೆಯೊಳಗೆ ನುಸುಳಿದ್ದ ಶಂಕಿತ ಅಫ್ಘಾನಿಸ್ತಾನದ ವ್ಯಕ್ತಿಯನ್ನು ಶನಿವಾರ ಬಂಧಿಸಿ ಭಯೋತ್ಪಾದನಾ ನಿಗ್ರಹ ಇಲಾಖೆಗೆ ವಿಚಾರಣೆಗಾಗಿ ಹಸ್ತಾಂತರಿಸಲಾಗಿದೆ ಎಂದು ಅಲ್ಲಿನ ಮಾಧ್ಯಗಳು ವರದಿ ಮಾಡಿದೆ. ಇಸ್ಲಾಮಾಬಾದ್ ಪೊಲೀಸರು ಅನುಮಾನಾಸ್ಪದ ವ್ಯಕ್ತಿಯನ್ನ ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
ಶಂಕಿತನು ಮೂರು ವಿಭಿನ್ನ ಮಾರ್ಗಗಳ ಮೂಲಕ ಪಿಎಂ ಹೌಸ್ ಒಳಗೆ ಎಂಟ್ರಿ ಕೊಟ್ಟಿದ್ದಾನೆ ಎಂದು ಪ್ರಧಾನಿ ಮನೆಯಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ಬಂಧನದ ನಂತರ ಭಯೋತ್ಪಾದನಾ ನಿಗ್ರಹ ಇಲಾಖೆ ( ಸಿ ಟಿ ಡಿ ) ಪೊಲೀಸರು ಮತ್ತು ಇತರೆ ಭದ್ರತಾ ಏಜೆನ್ಸಿಗಳು ಶಂಕಿತನನ್ನು ವಿಚಾರಣೆ ನಡೆಸುತ್ತಿವೆ ಎಂದು ವರದಿ ಹೇಳಿವೆ. "ಸಿಸಿಟಿವಿಯ ದೃಶ್ಯಗಳನ್ನು ವಶಕ್ಕೆ ಪಡೆದುಕೊಂಡು ಶಂಕಿತನು ಹೇಗೆ ಪಿಎಂ ಹೌಸ್ ಅನ್ನು ಪ್ರವೇಶಿಸಿದನು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿವೆ" ಎಂದು ಸುದ್ದಿಸಂಸ್ಥೆಯೊಂದು ತಿಳಿಸಿದೆ.
ಇದನ್ನೂ ಓದಿ : ಪಾಕ್ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್... ಅಭಿನಂದನೆ ಸಲ್ಲಿಸಿದ ಮೋದಿ
ಶೆಹಬಾಜ್ ಶರೀಫ್ ಬಗ್ಗೆ : 1951 ರಲ್ಲಿ ಪಾಕಿಸ್ತಾನದ ಲಾಹೋರ್‌ನಲ್ಲಿ ಜನಿಸಿದ ಶೆಹಬಾಜ್ ಶರೀಫ್ ಅವರು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್)ನ ಅಧ್ಯಕ್ಷರಾಗಿದ್ದ ಶೆಹಬಾಜ್ ಅವರು ಪಾಕಿಸ್ತಾನ ಪಾರ್ಲಿಮೆಂಟ್‌ನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿದ್ದ ಇಮ್ರಾನ್ ಖಾನ್ ಅವರನ್ನು ಪದಚ್ಯುತಿಗೊಳಿಸುವುದರಲ್ಲಿ ಯಶಸ್ವಿಯಾಗಿ ಸದ್ಯಕ್ಕೆ ಪಾಕ್ನ ಪ್ರಧಾನ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ : 'ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಲು ಕಾಶ್ಮೀರ ವಿವಾದ ಇತ್ಯರ್ಥವಾಗ್ಬೇಕು' : ಪಾಕ್ ನಿಯೋಜಿತ ಪ್ರಧಾನಿ
ಪಾಕ್ ನುಸುಳುಕೋರ ಅರೆಸ್ಟ್ : ಕಳೆದ ಐದು ದಿನಗಳ ಹಿಂದೆ ಅಂದ್ರೆ ಏ.5 ರಂದು ಬಿಎಸ್‌ಎಫ್ ಯೋಧರು ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿದ್ದಾರೆ. ಆರೋಪಿಯು ಗಡಿ ಬಾಗದಲ್ಲಿ ಅಳವಡಿಸಿದ್ದ ತಂತಿ ಬೇಲಿಯನ್ನು ದಾಟಿ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಈ ವೇಳೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಬಿಎಸ್ಎಫ್ ಸಿಬ್ಬಂದಿ ತಕ್ಷಣ ಆತನನ್ನು ಬಂಧಿಸಿದ್ದಾರೆ. ಬಿಒಪಿ ಬಳಿಯ ಗೇಟ್ನಿಂದ ಕೆಳಗಿಳಿದ ಕೂಡಲೇ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಪಾಕಿಸ್ತಾನದ ನಗರ್‌ಪಾರ್ಕರ್‌ನ ನಿವಾಸಿಯಾದ ದಯಾರಾಮ್ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಪಾಕ್ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್... ಅಭಿನಂದನೆ ಸಲ್ಲಿಸಿದ ಮೋದಿ
ಇನ್ನು ಅದೇ ದಿನದಂದು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು, ತಹಸಿಲ್ ಖಾರಿಯ ದೂರದ ಬೆಟ್ಟ ಮತ್ತು ಅರಣ್ಯ ಪ್ರದೇಶದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಭಯೋತ್ಪಾದನೆಗೆ ಸಂಬಂಧಿತ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದವು.
ಇದನ್ನೂ ಓದಿ : ಭಾರತ - ಪಾಕಿಸ್ತಾನ ಗಡಿಯಲ್ಲಿ ಪಾಕ್ ನುಸುಳುಕೋರ ಅರೆಸ್ಟ್