ETV Bharat / international

ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಕೊಲೆ, ಹಂತಕನ ಹತ್ಯೆ! - ಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್

ಅಮೆರಿಕದ ಟೆಕ್ಸಾಸ್‌ನ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ 18 ಮಕ್ಕಳು ಮತ್ತು ಓರ್ವ ಶಿಕ್ಷಕ ಸೇರಿ ಒಟ್ಟು 21 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

Texas school shooting
ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ
author img

By

Published : May 25, 2022, 6:52 AM IST

Updated : May 25, 2022, 11:52 AM IST

ಉವಾಲ್ಡೆ(ಅಮೆರಿಕ): ಟೆಕ್ಸಾಸ್‌ನ ಪ್ರಾಥಮಿಕ ಶಾಲೆಯಲ್ಲಿ 18ರ ಹರೆಯದ ವ್ಯಕ್ತಿಯೊಬ್ಬ ನಡೆಸಿದ ಅತ್ಯಂತ ಅಮಾನವೀಯ ಗುಂಡಿನ ದಾಳಿಯಲ್ಲಿ 18 ಮಕ್ಕಳು ಮತ್ತು ಓರ್ವ ಶಿಕ್ಷಕ ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ಗವರ್ನರ್ ಗ್ರೆಗ್‌ ಅಬಾಟ್ ಈ ಘಟನೆಯ ಕುರಿತು ಮಾಹಿತಿ ನೀಡಿದ್ದು, ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

  • Texans are grieving for the victims of this senseless crime & for the community of Uvalde.

    Cecilia & I mourn this horrific loss & urge all Texans to come together.

    I've instructed @TxDPS & Texas Rangers to work with local law enforcement to fully investigate this crime. pic.twitter.com/Yjwi8tDT1v

    — Greg Abbott (@GregAbbott_TX) May 24, 2022 " class="align-text-top noRightClick twitterSection" data=" ">

2012ರಲ್ಲಿ ಕನೆಕ್ಟಿಕಟ್‌ನ ನ್ಯೂಟೌನ್‌ನಲ್ಲಿರುವ ಸ್ಯಾಂಡಿ ಹುಕ್ ಎಲಿಮೆಂಟರಿ ಶಾಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿ ಬಳಿಕ ನಡೆದ ಅತಿ ದೊಡ್ಡ ದುರಂತ ಇದಾಗಿದೆ.

  • There is an active shooter at Robb Elementary. Law enforcement is on site. Your cooperation is needed at this time by not visiting the campus. As soon as more information is gathered it will be shared.

    The rest of the district is under a Secure Status.

    — Uvalde CISD (@Uvalde_CISD) May 24, 2022 " class="align-text-top noRightClick twitterSection" data=" ">

ಇತ್ತೀಚೆಗೆ, ನ್ಯೂಯಾರ್ಕ್​ನ ಬಫಲೊ ನಗರದ ಸೂಪರ್‌ ಮಾರ್ಕೆಟ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದರು. ಎರಡು ವಾರಗಳ ನಂತರ ಮತ್ತೆ ಈ ಘಟನೆ ನಡೆದಿದೆ. ಆ ಘಟನೆಯನ್ನು 'ಜನಾಂಗೀಯ ಪ್ರೇರಿತ' ಸಾಮೂಹಿಕ ಗುಂಡಿನ ದಾಳಿ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಅಮೆರಿಕದಲ್ಲಿ 'ಜನಾಂಗೀಯ ಪ್ರೇರಿತ' ಸಾಮೂಹಿಕ ಗುಂಡಿನ ದಾಳಿ: 10 ಮಂದಿ ಸಾವು

ಶೋಕಾಚರಣೆಗೆ ಬೈಡನ್ ಸೂಚನೆ: ಶಾಲೆಯಲ್ಲಿ ಮೃತಪಟ್ಟ ಮಕ್ಕಳಿಗೆ ಸಂತಾಪ ಸೂಚಿಸಲು ಶ್ವೇತ ಭವನ ಸೇರಿದಂತೆ ಇತರ ಸಾರ್ವಜನಿಕ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಶನಿವಾರದ(ಮೇ 28) ತನಕ ಅರ್ಧಕ್ಕೆ ಹಾರಿಸಲು ಅಧ್ಯಕ್ಷ ಜೋ ಬೈಡನ್ ಸೂಚನೆ ನೀಡಿದ್ದಾರೆ.

  • US flag shall be flown at half-staff at WH &upon all public buildings,at all military posts,naval stations, naval vessels of Federal Govt in Columbia& throughout US, until May 28 as mark of respect for victims of shooting at Robb Elementary School in Uvalde,Texas: President Biden

    — ANI (@ANI) May 24, 2022 " class="align-text-top noRightClick twitterSection" data=" ">

ಅಮೆರಿಕದಲ್ಲಿ ಗನ್ ಲಾಬಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಜಪಾನ್ ಸೇರಿದಂತೆ ಏಷ್ಯಾದ ದೇಶಗಳಿಗೆ ಐದು ದಿನಗಳ ಪ್ರವಾಸಕ್ಕೆ ತೆರಳಿದ್ದ ಬೈಡನ್ 'ಇಂತಹ ಪ್ರಕರಣಗಳು ವಿಶ್ವದ ಇತರ ದೇಶಗಳಲ್ಲಿ ಅಪರೂಪಕ್ಕೊಮ್ಮೆ ಆಗುತ್ತವೆ. ಆದರೆ ಅಮೆರಿಕದಲ್ಲಿ ಪದೇ ಪದೆ ಆಗುತ್ತಿರುವುದು ವಿಷಾದದ ಸಂಗತಿ. ನಾವು ಗನ್ ಲಾಬಿಗೆ ಕಡಿವಾಣ ಹಾಕುತ್ತೇವೆ. ಮೃತರ ಗೌರವಾರ್ಥ ದೇಶವ್ಯಾಪಿ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸುತ್ತೇವೆ' ಎಂದು ಹೇಳಿದರು.

'ಹೃದಯ ವಿದ್ರಾವಕ ಘಟನೆ': ಟೆಕ್ಸಾಸ್‌ ಶಾಲೆಯಲ್ಲಿ ನಡೆದ ಶಾಲೆಯ ಗುಂಡಿನ ದಾಳಿಯನ್ನು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀವ್ರವಾಗಿ ಖಂಡಿಸಿದ್ದಾರೆ. ಕಠಿಣ ಕಾನೂನು ಕ್ರಮ ಮತ್ತು ನಿಲುವು ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ದಾಳಿಯನ್ನು 'ಹೃದಯ ವಿದ್ರಾವಕ ದುರಂತ' ಎಂದಿದ್ದಾರೆ.

Last Updated : May 25, 2022, 11:52 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.