ಲಂಡನ್/ಬೆಂಗಳೂರು: ಬಸವೇಶ್ವರ ಪ್ರತಿಮೆಗೆ ಪ್ರೌಢ ಶಿಕ್ಷಣ ಸಚಿವ ಹಾಗೂ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ, ಹಾಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಗೌರವ ಸಲ್ಲಿಸಿದ್ದಾರೆ.
ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಲಂಡನ್‌ನಲ್ಲಿರುವ ಬಸವೇಶ್ವರರ ಪ್ರತಿಮೆಗೆ ಇಂದು ಬೆಳಗ್ಗೆ 11 ಗಂಟೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಬ್ರಿಟಿಷ್ ಭಾರತೀಯ/ಕನ್ನಡ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು. ಸಚಿವರನ್ನು ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾದ ಅಭಿಜೀತ್ ಸಾಲಿಮಠ ಮತ್ತು ಕನ್ನಡಿಗರು ಹಾಗೂ ಯುಕೆ ಅಧ್ಯಕ್ಷರಾದ ಶ್ರೀ ಗಣಪತಿ ಭಟ್ ಸ್ವಾಗತಿಸಿದರು.
ಥೇಮ್ಸ್ ನದಿಯ ದಡದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಿರುವ ಯುಕೆಯ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಈ ಕಾರ್ಯಕ್ರಮ ಆಯೋಜಿಸಿತ್ತು.
ಬ್ರಿಟಿಷ್ ಸಂಸತ್ತಿನ ಎದುರು ಭಾರತೀಯ ಪ್ರಜಾಪ್ರಭುತ್ವದ ಪ್ರವರ್ತಕ ಮತ್ತು ಶ್ರೇಷ್ಠ ಭಾರತೀಯನ ಅದರಲ್ಲೂ ಕನ್ನಡಿಗನ ಪ್ರತಿಮೆಯನ್ನು ನೋಡುವುದು ಪ್ರತಿಯೊಬ್ಬ ಭಾರತೀಯ/ಕನ್ನಡಿಗನಿಗೆ ಹೆಮ್ಮೆ. ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನ ಹಾಗೂ ಡಾ. ನೀರಜ್ ಪಾಟೀಲ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಬಸವೇಶ್ವರ ಪ್ರತಿಮೆ ನಿರ್ಮಾಣದ ಯೋಜನೆಯನ್ನು ಏಪ್ರಿಲ್ 2012 ರಲ್ಲಿ ಲಂಡನ್ ಬರೋ ಆಫ್ ಲ್ಯಾಂಬೆತ್‌ನ ಯೋಜನಾ ವಿಭಾಗವು ಅನುಮೋದಿಸಿತ್ತು ಮತ್ತು ನಂತರ ಬ್ರಿಟಿಷ್ ಸಾರ್ವಜನಿಕ ಪ್ರತಿಮೆಗಳ ಕಾಯ್ದೆ 1854 ರ ಪ್ರಕಾರ ಬ್ರಿಟಿಷ್ ಕ್ಯಾಬಿನೆಟ್ ಜುಲೈ 2012 ರಲ್ಲಿ ಅನುಮೋದಿಸಿತ್ತು.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 14 ನವೆಂಬರ್, 2015 ರಂದು ಈ ಐತಿಹಾಸಿಕ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.
ಇದನ್ನೂ ಓದಿ : 30 ವರ್ಷದ ನಂತರ ಕನ್ನಡ ಮಾತನಾಡುವಾಗ ರೋಮಾಂಚನವಾಗುತ್ತಿದೆ : ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ