ETV Bharat / international

ಕ್ಯಾಲಿಫೋರ್ನಿಯಾದಲ್ಲಿ ವಿಮಾನಗಳ ನಡುವೆ ಡಿಕ್ಕಿ: ಇಬ್ಬರು ಸಾವು

ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಎರಡು ವಿಮಾನಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಮೂವರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

author img

By

Published : Aug 19, 2022, 7:18 AM IST

planes collide in California
ಕ್ಯಾಲಿಫೋರ್ನಿಯಾದಲ್ಲಿ ವಿಮಾನಗಳ ನಡುವೆ ಡಿಕ್ಕಿ

ಕ್ಯಾಲಿಫೋರ್ನಿಯಾ (ಯುಎಸ್): ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಎರಡು ವಿಮಾನಗಳು ಸ್ಥಳೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದ ವ್ಯಾಟ್ಸನ್‌ವಿಲ್ಲೆ ಮುನ್ಸಿಪಲ್ ಏರ್‌ಪೋರ್ಟ್‌ನಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ. ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಪ್ರಕಾರ, ಅಪಘಾತದ ಸಮಯದಲ್ಲಿ ಅವಳಿ - ಎಂಜಿನ್ ಸೆಸ್ನಾ 340ರಲ್ಲಿ ಇಬ್ಬರು ಮತ್ತು ಒಂದೇ ಇಂಜಿನ್ ಸೆಸ್ನಾ 152ನಲ್ಲಿ ಪೈಲಟ್ ಮಾತ್ರ ಇದ್ದರು ಎನ್ನಲಾಗಿದೆ.

ಘರ್ಷಣೆಗೆ ಮುನ್ನ ಪೈಲಟ್‌ಗಳು ವಿಮಾನ ಲ್ಯಾಂಡಿಂಗ್​​ ಅಂತಿಮ ಹಂತದಲ್ಲಿದ್ದರು ಎಂದು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್​​ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದ ಬಗ್ಗೆ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಜಗತ್ತಿನ ಅತ್ಯಂತ ಯುವ ಪ್ರಧಾನಿ ಮರಿನ್​ ಅವರ ಪಾರ್ಟಿ ವಿಡಿಯೋ ಲೀಕ್​: ಜನರ ಪ್ರತಿಕ್ರಿಯೆ ಹೇಗಿದೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.