ವಾಷಿಂಗ್ಟನ್ : ಅಮೆರಿಕದ ಪ್ರಭಾವಿ ರಾಜತಾಂತ್ರಿಕರೊಬ್ಬರು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾದರು. ಈ ವೇಳೆ ಅವರು ಭಾರತ ಜಿ 20 ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಹತ್ವದ ಮಾತುಕತೆ ನಡೆಸಿದರು. ಅಷ್ಟೇ ಅಲ್ಲ ಭಾರತ ಅಮೆರಿಕ ನಡುವಣ ದ್ವಿಪಕ್ಷೀಯ ಸಂಬಂಧಗಳ ಸುಧಾರಣೆ ಹಾಗೂ ವೃದ್ಧಿಯ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು.
ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಆಯೋಜಿಸಿದ್ದ ಬ್ರೀಫಿಂಗ್‌ನಲ್ಲಿ ಪಾಲ್ಗೊಳ್ಳುವ ಮೊದಲು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ವಿಕ್ಟೋರಿಯಾ ನುಲಾಂಡ್ ಅವರು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಜೈಶಂಕರ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು ಎಂದು ಭಾರತೀಯ ವಿದೇಶಾಂಗ ಇಲಾಖೆ ನೀಡಿರುವ ತನ್ನ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದೆ.
ಭಾರತ ಇತ್ತೀಚೆಗಷ್ಟೇ G20 ಅಧ್ಯಕ್ಷ ಸ್ಥಾನ ವಹಿಸಿಕೊಂಡಿದೆ. ಈ ವರ್ಷ ಭಾರತ ಜಿ-20 ರಾಷ್ಟ್ರಗಳ ಅಧ್ಯಕ್ಷತೆ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತ ಭಾರಿ ಸಿದ್ಧತೆಗಳಲ್ಲಿ ತೊಡಗಿದೆ. ಇಂಡೋ-ಪೆಸಿಫಿಕ್ ಮತ್ತು ಜಾಗತಿಕವಾಗಿ ಭದ್ರತೆ ಮತ್ತು ಸಮೃದ್ಧಿಗೆ ಬೆಂಬಲ ನೀಡಲು ಅಮೆರಿಕ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿಗಳು ಭಾರತದ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಇದನ್ನು ಓದಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನಕ್ಕೆ ಭಾರತ ಸನ್ನಿಹಿತ.. ಐದರಲ್ಲಿ ಮೂರು ರಾಷ್ಟ್ರಗಳಿಂದ ಬೆಂಬಲ