ETV Bharat / international

ನವದೆಹಲಿಯಲ್ಲಿ ಜಿ20 ಶೃಂಗ: ಅಮೆರಿಕ ಅಧ್ಯಕ್ಷ ಜೋ ಬೈಡನ್​​​​​​​​​​​ ನಾಲ್ಕು ದಿನಗಳ ಭಾರತ ಪ್ರವಾಸ - ಅಧ್ಯಕ್ಷ ಬೈಡನ್​​

ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ G20 ಶೃಂಗಸಭೆ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್​​ ಪ್ರಸ್ತಾಪಿಸುವ ವಿಷಯಗಳ ಬಗ್ಗೆ ಶ್ವೇತಭವನದ ವಕ್ತಾರರು ಮಾಹಿತಿ ನೀಡಿದ್ದಾರೆ.

White House: At G20, Biden will reaffirm US commitment of economic cooperation, discuss
ನವದೆಹಲಿಯಲ್ಲಿ ಜಿ20 ಶೃಂಗ: ಅಮೆರಿಕ ಅಧ್ಯಕ್ಷ ಜೋ ಬೈಡನ್​​​​​​​​​​​ ನಾಲ್ಕು ದಿನಗಳ ಭಾರತ ಪ್ರವಾಸ
author img

By ETV Bharat Karnataka Team

Published : Aug 29, 2023, 8:24 AM IST

ವಾಷಿಂಗ್ಟನ್: ಜಾಗತಿಕ ಆರ್ಥಿಕ ಸಹಕಾರದ ಪ್ರಧಾನ ವೇದಿಕೆಯಾಗಿರುವ ಜಿ 20 ಸುಧಾರಣೆಗೆ ಅಮೆರಿಕ ಬದ್ಧವಾಗಿದೆ ಎಂಬುದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್​​ ಪುನರುಚ್ಚರಿಸಲಿದ್ದಾರೆ. ಈ ಬಾರಿಯ ಜಿ-20 ಶೃಂಗಸಭೆಯಲ್ಲಿ ಉಕ್ರೇನ್‌ - ರಷ್ಯಾ ಯುದ್ಧದ ಸಾಮಾಜಿಕ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಅಮೆರಿಕ ಅಧ್ಯಕ್ಷರು ಮಾತನಾಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಮಂಗಳವಾರ ಈ ಬಗ್ಗೆ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಅಧ್ಯಕ್ಷರ ಪ್ರವಾಸದ ವೇಳಾಪಟ್ಟಿ ಪ್ರಕಟಿಸಿದ ಪಿಯರೆ, ಬೈಡನ್​ ಅವರು​ ನವದೆಹಲಿಯಲ್ಲಿ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಸೆಪ್ಟೆಂಬರ್ 10 ರಂದು ವಿಯೆಟ್ನಾಂನ ಹನೋಯ್‌ಗೆ ಪ್ರಯಾಣಿಸಲಿದ್ದಾರೆ ಎಂದು ಹೇಳಿದರು. ಜಿ-20 ಜಾಗತಿಕವಾಗಿ ಆರ್ಥಿಕ ಸಹಕಾರದ ಪ್ರಧಾನ ವೇದಿಕೆಯಾಗಿದ್ದು, ಅಮೆರಿಕ ತನ್ನ ಬದ್ಧತೆಯನ್ನು ಪುನರುಚ್ಚರಿಸಲಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ಅಧ್ಯಕ್ಷ ಬೈಡನ್​​ ಅವರು ಜಾಗತಿಕ ಸಮಸ್ಯೆಗಳನ್ನು ನಿಭಾಯಿಸಲು ಜಂಟಿ ಪ್ರಯತ್ನಗಳ ಕುರಿತು ಜಿ-20 ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕ್ಲೀನ್ ಇಂಧನ ಪರಿವರ್ತನೆ ಮತ್ತು ಹವಾಮಾನ ಬದಲಾವಣೆ ವಿರುದ್ಧ ಹೋರಾಡಲು ಹಾಗೂ ಉಕ್ರೇನ್‌ನಲ್ಲಿ ರಷ್ಯಾದ ಯುದ್ಧದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವ ಕುರಿತಂತೆ ಸಭೆಯಲ್ಲಿ ಅಮೆರಿಕ ಪ್ರಸ್ತಾಪಿಸಲಿದೆ. ಅಷ್ಟೇ ಅಲ್ಲ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯ ಹೆಚ್ಚಳ, ಬಡತನದ ವಿರುದ್ಧದ ಹೋರಾಟ ಹಾಗೂ ಪ್ರಪಂಚದಾದ್ಯಂತದ ದೇಶಗಳನ್ನು ಬಾಧಿಸುತ್ತಿರುವ ಮಹತ್ವದ ಅಂತಾರಾಷ್ಟ್ರೀಯ ಸವಾಲುಗಳ ಬಗ್ಗೆ ಈ ಬಾರಿಯ ಜಿ - 20 ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶ್ವೇತಭವನದ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್​​ ಅವರು ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯ ರಾಷ್ಟ್ರಗಳೊಂದಿಗೆ ಉಕ್ರೇನ್ ಯುದ್ಧ ಸೇರಿದಂತೆ ಹವಾಮಾನ ಬದಲಾವಣೆಯಂತಹ ಜಾಗತಿಕ ಸಮಸ್ಯೆಗಳನ್ನು ನಿಭಾಯಿಸಲು ಜಂಟಿ ಪ್ರಯತ್ನಗಳನ್ನು ಮಾಡುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ಆಗಸ್ಟ್​​ 22 ರ ಹೇಳಿಕೆಯಲ್ಲೇ ದೃಢಪಡಿಸಿದೆ. ಅಮೆರಿಕ ಅಧ್ಯಕ್ಷ ಬೈಡನ್​ ಮತ್ತು G20 ಪಾಲುದಾರರು ಸ್ವಚ್ಛ ಇಂಧನ ಪರಿವರ್ತನೆ ಮತ್ತು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಹವಾಮಾನ ಬದಲಾವಣೆ ಎದುರಿಸುವ ಬಗ್ಗೆ ಸಮಗ್ರ ಚರ್ಚೆ ನಡೆಸುತ್ತಾರೆ ಎಂದು ಶ್ವೇತಭವನ ಸ್ಪಷ್ಟಪಡಿಸಿದೆ.

ಭಾರತವು ಸೆಪ್ಟೆಂಬರ್ 9 ಮತ್ತು 10 ರಂದು G20 ಶೃಂಗಸಭೆ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ನಲ್ಲಿ ಅಮೆರಿಕಕ್ಕೆ ಗೆ ಭೇಟಿ ನೀಡಿದ್ದರು, ಅಲ್ಲಿ ಬೈಡನ್​​ ಅವರು ಸೆಪ್ಟೆಂಬರ್‌ನಲ್ಲಿ ನವದೆಹಲಿಯಲ್ಲಿ G20 ಶೃಂಗಸಭೆ ಎದುರು ನೋಡುತ್ತಿರುವುದಾಗಿ ಹೇಳಿದ್ದರು.( ANI)

ಇದನ್ನು ಓದಿ: ಜಿ - 20 ಶೃಂಗ: ಜಾಗತೀಕರಣಕ್ಕೆ ಮಾನವೀಯ ಸ್ಪರ್ಶ ನೀಡಿದ ಪ್ರಧಾನಿ ಮೋದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.