ETV Bharat / jagte-raho

ಉತ್ತರ ಪ್ರದೇಶದಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬರ್ಬರ ಕೊಲೆ..! - ಮಾಯಾವತಿ

ಹದಿಮೂರು ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

rape in uttar pradesh
ಉತ್ತರ ಪ್ರದೇಶದಲ್ಲಿ ಅತ್ಯಾಚಾರ
author img

By

Published : Aug 16, 2020, 12:23 PM IST

ಲಖೀಂಪುರಖೇರಿ (ಉತ್ತರ ಪ್ರದೇಶ): 13 ವರ್ಷದ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ, ಬರ್ಬರವಾಗಿ ಕೊಂದಿರುವ ಹೇಯಕೃತ್ಯ ಲಖೀಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ.

ನೇಪಾಳಕ್ಕೆ ಸಮೀಪವಿರುವ ಇಸಾನಗರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಬ್ಬಿನ ತೋಟದಲ್ಲಿ ನಾಲಿಗೆ ಕತ್ತರಿಸಿದ ಹಾಗೂ ಕಣ್ಣುಗಳು ಹೊರಬಂದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಡೆಸಿದಾಗ ಅತ್ಯಾಚಾರವಾಗಿರುವುದು ದೃಢಪಟ್ಟಿದೆ. ಅತ್ಯಾಚಾರ, ಕೊಲೆ ಹಾಗೂ ರಾಷ್ಟ್ರೀಯ ಭದ್ರತಾ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್​​ ಕಮೀಷನರ್​​ ಸತ್ಯೇಂದ್ರ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಪ್ರಕರಣದ ಬಗ್ಗೆ ವಿವರಿಸುತ್ತಿರುವ ಎಸ್​ಪಿ ಸತ್ಯೇಂದ್ರ ಕುಮಾರ್

ಸಂತೋಷ್ ಯಾದವ್​ ಹಾಗೂ ಸಂಜಯ್ ಗೌತಮ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302( ಕೊಲೆ), ಸೆಕ್ಷನ್ 376ಡಿ ( ಗ್ಯಾಂಗ್​ರೇಪ್​) ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ, ಇಂಥಹ ಕೃತ್ಯಗಳಿಂದ ಅಂದಿನ ಬಿಎಸ್​ಪಿ ಸರ್ಕಾರ ಹಾಗೂ ಪ್ರಸ್ತುತ ಬಿಜೆಪಿ ಸರ್ಕಾರದ ನಡುವಿನ ವ್ಯತ್ಯಾಸ ಗೊತ್ತಾಗುತ್ತಿದೆ. ಇದೊಂದು ನಾಚಿಕೆಗೇಡಿನ ಕೃತ್ಯವೆಂದು ಟ್ವಿಟ್ಟರ್​ನಲ್ಲಿ ಘಟನೆಯನ್ನು ಖಂಡಿಸಿದ್ದಾರೆ.

ಭೀಮ್​ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್​ ಕೂಡಾ ಪ್ರತಿಕ್ರಿಯಿಸಿ ದಲಿತರ ಮೇಲಿನ ದಬ್ಬಾಳಿಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿದೆ. ನಮ್ಮ ಹೆಣ್ಣುಮಕ್ಕಳು, ಮನೆಗಳು ಸುರಕ್ಷಿತವಾಗಿಲ್ಲ. ಎಲ್ಲೆಡೆ ಭಯದ ವಾತಾವರಣ ಸೃಷ್ಟಿಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.