ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಡಿ. 28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇಂದು ಬೆಳಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಾಹ್ನಕ್ಕೆ ವಿಚಾರಣೆಯನ್ನು ಮುಂದೂಡಿತ್ತು. ಮಧ್ಯಾಹ್ನ ಮತ್ತೆ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಓದಿ-ಚಂದ್ರಶೇಖರ ಇಂಡಿ ಸಿಬಿಐ ನ್ಯಾಯಾಲಯಕ್ಕೆ ಹಾಜರು : ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿಕೆ
ಸಿಬಿಐ ಕಸ್ಟಡಿಗೆ ಕೇಳಿರುವ ವಿಚಾರದ ತೀರ್ಪನ್ನು ನಾಳೆಗೆ ಕಾಯ್ದಿರಿಸಲಾಗಿದೆ. ಈ ಹಿಂದೆ ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಎರಡು ದಿನ ಕಸ್ಟಡಿಗೆ ನೀಡುವಂತೆ ಸಿಬಿಐ ಕೋರಿತ್ತು. ಈ ಮನವಿ ಅರ್ಜಿಯನ್ನು ಕೋರ್ಟ್ ನಾಳೆಗೆ ಕಾಯ್ದಿರಿಸಿದೆ.