ETV Bharat / jagte-raho

1000 ಕೋಟಿ ರೂ. ಮೌಲ್ಯದ 191 ಕೆಜಿ ಡ್ರಗ್​ ವಶಕ್ಕೆ..! - Directorate of Revenue Intelligence

ಮಹಾರಾಷ್ಟ್ರದಿಂದ ಅಫ್ಘಾನಿಸ್ತಾನಕ್ಕೆ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

drugs seized
ಡ್ರಗ್​ ವಶಕ್ಕೆ
author img

By

Published : Aug 10, 2020, 1:58 PM IST

ರಾಯಗಡ್: ಕಂದಾಯ ಗುಪ್ತಚರ ನಿರ್ದೇಶನಾಲಯ ಹಾಗೂ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 1000 ಕೋಟಿ ರೂ. ಮೌಲ್ಯದ ಬರೋಬ್ಬರಿ 191 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವಿ ಮುಂಬೈನ ನ್ಹಾ ಶೆವಾ ಬಂದರಿನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಪ್ಲಾಸ್ಟಿಕ್ ಪೈಪ್​ಗಳ ಒಳಗಡೆ ಮಾದಕ ವಸ್ತುಗಳನ್ನು ಅಡಗಿಸಿಟ್ಟುಕೊಂಡು ಮಹಾರಾಷ್ಟ್ರದಿಂದ ಅಫ್ಘಾನಿಸ್ತಾನಕ್ಕೆ ಸಾಗಿಸುತ್ತಿದ್ದರು.

drugs seized
ಡ್ರಗ್​ ವಶಕ್ಕೆ

ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ಪೊಲೀಸ್ ಕಸ್ಟಡಿಗೆ ಆದೇಶಿಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ತಿಳಿಸಿದೆ. ಕಸ್ಟಮ್ಸ್ ಅಧಿಕಾರಿಗಳು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.