ಉತ್ತರ ಪ್ರದೇಶ: ವಲಸೆ ಕಾರ್ಮಿಕರಿದ್ದ ಪಿಕಪ್ ವಾಹನವು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಬಿಜ್ನೋರ್ ಜಿಲ್ಲೆಯ ದೆಹಲಿ-ಬದೌನ್ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.