ಚಂಡೀಗಡ (ಪಂಜಾಬ್): ಪಕ್ಕದ ಮನೆಯ 4 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು 16 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್‌ನ ಬರ್ನಾಲಾ ಜಿಲ್ಲೆಯ ದಂಗರ್ ಗ್ರಾಮದಲ್ಲಿ ನಡೆದಿದೆ.
ಆರೋಪಿ ಬಾಲಕನನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಐಪಿಸಿಯ ಸೆಕ್ಷನ್ 376 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಧನೌಲಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಕುಲದೀಪ್ ಸಿಂಗ್ ತಿಳಿಸಿದ್ದಾರೆ.
ಶೀಘ್ರದಲ್ಲೇ ಆರೋಪಿಯನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಸದ್ಯ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.