ಹಥ್ರಾಸ್ (ಉತ್ತರ ಪ್ರದೇಶ): ಬೊಲೆರೊ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದಿದೆ.
ಬೊಲೆರೊ ವಾಹನದಲ್ಲಿದ್ದ ಎಲ್ಲರೂ ರಾಜಸ್ಥಾನದ ಅಲ್ವಾರ್ ನಿವಾಸಿಗಳಾಗಿದ್ದು, ಗಂಗಾ ನದಿಯಲ್ಲಿ ಸ್ನಾನ ಮಾಡಲೆಂದು ಉತ್ತರಪ್ರದೇಶಕ್ಕೆ ಬಂದಿದ್ದರು. ಮಾರ್ಗಮಧ್ಯೆ ತರಕಾರಿ ತುಂಬಿದ ಟ್ರಕ್ ನಿಯಂತ್ರಣ ತಪ್ಪಿ ಬೊಲೆರೊಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಮಕ್ಕಳಿಗೆ ಆಸ್ತಿ ನೀಡುವ ವಿಚಾರಕ್ಕೆ ಜಗಳ: ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ
ಅಪಘಾತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.