ಪುಣೆ: 60 ವರ್ಷದ ಕಾಮುಕನೋರ್ವ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅತ್ಯಾಚಾರವೆಸಗಿರುವ ಆರೋಪದ ಮೇಲೆ ಈಗಾಗಲೇ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಪುಣೆ ನಗರದ ಕೋಥ್ರೂದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಮುಕ ವ್ಯಕ್ತಿ ಚಾಕೋಲೆಟ್ ನೀಡುವ ಆಮಿಷವೊಡ್ಡಿ ಈ ದುಷ್ಕೃತ್ಯವೆಸಗಿದ್ದಾನೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ಇತ್ತ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯರನ್ನ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.