ಮಸ್ಸೂರಿ: ಉತ್ತರಾಖಂಡದ ನೈನ್ಬಾಘ್ ಪ್ರದೇಶದಲ್ಲಿ ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಡೆಹ್ರಾಡೂನ್ನಿಂದ ಲಖಮಂಡಲ್ ಮಾರ್ಗವಾಗಿ ಸಾಗುತ್ತಿದ್ದ ಕಾರು ನೈನ್ಬಾಘ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಪ್ರಪಾತಕ್ಕೆ ಬಿದ್ದಿದೆ. ತೆಹ್ರಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ನಗರದಿಂದ ಈ ಪ್ರದೇಶ ಸುಮಾರು 40ಕಿ.ಮೀ ದೂರದಲ್ಲಿದೆ.

ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.