ETV Bharat / jagte-raho

ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 8 ಮಂದಿ ಬಲಿ - Pune Rural police

ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 8 ಜನರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

8 People Killed in accident in Maharastra
ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ
author img

By

Published : Sep 21, 2020, 5:39 PM IST

ಮಹಾರಾಷ್ಟ್ರ: ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿರುವ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 8 ಜನರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ

ಮೊದಲ ಅಪಘಾತದಲ್ಲಿ ಪಾದಾಚಾರಿಗೆ ಅಪರಿಚಿತ ವಾಹವೊಂದು ಗುದ್ದಿ ಹೋಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಎರಡನೇ ಪ್ರಕರಣದಲ್ಲಿ ನಿಂತಿದ್ದ ಕಂಟೈನರ್​ಗೆ​ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪುಣೆ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮೂರನೇಯ ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ರಕ್​ನ ಚಕ್ರವು ಚರಂಡಿಯಲ್ಲಿ ಸಿಲುಕಿ ಹಾಕಿಕೊಂಡಿತ್ತು. ಈ ವೇಳೆ ಬಂದ ಎರಡು ಕಾರುಗಳು ಟ್ರಕ್​ಗೆ ಗುದ್ದಿವೆ. ಘಟನೆಯಲ್ಲಿ ಕಾರು ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.