ಪೂರ್ವ ಗೋದಾವರಿ: 50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಬಳಿಕ ಆಕೆಯನ್ನ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಇವಾಲವರಂ ಮಂಡಲ್ನ ಜಿ ವೆಮವರಂನಲ್ಲಿ ನಡೆದಿದೆ.
ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಹುಡುಕುತ್ತಿರುವುದಾಗಿ ಹಾಗೂ ಸಂಜೆಯ ವೇಳೆಗೆ ಪ್ರಕರಣ ಬಗೆಹರಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮೃತ ಮಹಿಳೆಯ ಪತಿ ಹಾಗೂ ಮಗ ತೀರಿಕೊಂಡು ಕೆಲ ವರುಷಗಳಾಗಿದ್ದು, ಮಗಳು ಹೈದರಾಬಾದ್ನಲ್ಲಿ ವಾಸವಿದ್ದಾರೆ. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದ ವೇಳೆ ಘಟನೆ ನಡೆದಿದೆ. ಹೈದರಾಬಾದ್ನ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ಧ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿರುವಾಗಲೇ, ಈ ರೀತಿ ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಮಾನವ ಕುಲವನ್ನೇ ಪ್ರಶ್ನಿಸುವಂತಿದೆ.