ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಆದರೆ ಕೊರೊನಾ ಮಧ್ಯೆ ಕೆಲಸ ಮಾಡುವುದು ಹೇಗೆ, ಜೀವನ ಹೇಗೆ ಸಾಗಿಸುವುದು ಅನ್ನೋ ಭಯದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮಣಿ ಕೆ. (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಇವರು, ಲಾಕ್ಡೌನ್ ಇದ್ದ ಕಾರಣ ಮನೆಯಲ್ಲಿಯೇ ಕೆಲಸ ಇಲ್ಲದೆ ಕಾಲ ಕಳೆಯುತ್ತಿದ್ದರು. ಕೈಯ್ಯಲ್ಲಿ ದುಡ್ಡು ಇಲ್ಲದ ಕಾರಣ ದಿನವೂ ಕುಟುಂಬದಲ್ಲಿ ಕಲಹ ನಡೆಯುತ್ತಿತ್ತಂತೆ. ಹಾಗಾಗಿ ಮುಂದೆ ಹೇಗೆ ಜೀವನ ಸಾಗಿಸುವುದು ಎನ್ನುವ ಭಯದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.