ಚಾಮರಾಜನಗರ: ವ್ಯವಸಾಯ ಭೂಮಿಯಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯೊಬ್ಬನನ್ನು ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಲ್ಲವತ್ತ ಗ್ರಾಮದ ಸೋಲಿಗ ಜನಾಂಗದ ಜಡೇಗೌಡ(40) ಬಂಧಿತ ಆರೋಪಿ. ಈತ ಕೃಷಿ ಭೂಮಿಯಲ್ಲಿ ಗಾಂಜಾ ಬೆಳೆದಿದ್ದ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಮಾದಯ್ಯ ಎಂಬಾತ ಪರಾರಿಯಾಗಿದ್ದಾನೆ.
ಇನ್ನು ಬಂಧಿತನಿಂದ 26.8 ಕೆಜಿ ತೂಕದ 134 ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗಾಂಜಾ ಪ್ರಕರಣವನ್ನು ಪತ್ತೆ ಹಚ್ಚಿದ ಚಾಮರಾಜನಗರ ಪೂರ್ವ ಠಾಣೆ ಪೊಲೀಸರಿಗೆ 20 ಸಾವಿರ ರೂ. ಮತ್ತು ಸಿಇಎನ್ ಪೊಲೀಸರಿಗೆ 5 ಸಾವಿರ ರೂ. ನಗದು ಬಹುಮಾನವನ್ನು ಪೊಲೀಸ್ ವರಿಷ್ಠಾಧಿಕಾರಿ ನೀಡಿದ್ದಾರೆ.