ಕಡಬ: ಮರ್ದಾಳ ಪೇಟೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಷಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಾಂತಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಹೋಟೆಲ್ ಸಾಂತಪ್ಪ ಎಂದೇ ಚಿರಪರಿಚಿತರಾಗಿದ್ದ ಇವರು, ಶುಕ್ರವಾರ ಸಂಜೆ ಐತ್ತೂರು ಗ್ರಾಮದ ಭ್ರಾಂತಿಕಟ್ಟೆಯ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ತಡರಾತ್ರಿ ವೇಳೆ ಮೃತದೇಹ ಪತ್ತೆಯಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.