ಮಂಗಳೂರು: ರೈಲು ಹಳಿಗೆ ತಲೆ ಕೊಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಉಳ್ಳಾಲ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
ಬೆಳಗಾವಿ ಮೂಲದ ಸಮ್ಮದ್ ರಾಯಗೌಡ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎನ್ನಲಾಗಿದೆ. ಈತ ಬೆಳಗಾವಿಯ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಮಂಗಳೂರಿನ ಉಳ್ಳಾಲದ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಘಟನೆಗೆ ಕಾರಣ ತಿಳಿದುಬಂದಿಲ್ಲ.
ಸದ್ಯ ಉಳ್ಖಾಲ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.