ಮಂಡ್ಯ: ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲೂಜಿನ ಅಗಸರಹಳ್ಳಿ ಗೇಟ್ ಬಳಿ ನಡೆದಿದೆ.
ಮೃತ ಚಾಲಕ ತಮಿಳುನಾಡು ಮೂಲದವನಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿ ರಭಸಕ್ಕೆ ಟಿಪ್ಪರ್ ಕ್ಯಾಬಿನ್ನಲ್ಲಿ ಚಾಲಕನ ಶವ ಸಿಲುಕಿದ್ದು, ಸ್ಥಳೀಯರ ಸಹಾಯದಿಂದ ಪೊಲೀಸರು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಕೆ.ಆರ್.ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.