ಹಾಸನ: ನಿಂತಿದ್ದ ಟ್ರ್ಯಾಕ್ಟರ್ಗೆ ದ್ವಿಚಕ್ರ ವಾಹನಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸ್ಕೂಟಿ ಸವಾರನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದ್ವಿಚಕ್ರ ವಾಹನ ಚಾಲಕನ ಅಜಾಗೃತಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸಾವಿಗೀಡಾದ ವ್ಯಕ್ತಿ ಯಾರು ಎಂಬುದು ತಿಳಿದುಬಂದಿಲ್ಲ. ಹಾಸನದಿಂದ ದುದ್ದ ಕಡೆಗೆ ಹೋಗುವ ಮಾರ್ಗದಲ್ಲಿ ನಿಂತಿದ್ದ ಟ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಬಸಕ್ಕೆ ಸ್ಕೂಟಿ ಮುಂಭಾಗ ನಜ್ಜುಗುಜ್ಜಾಗಿದೆ. ಹಿಂಬದಿಯಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರನ್ನು ಹುಲ್ಲಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ. ಹಾಸನ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.