ETV Bharat / jagte-raho

ಬೈಕ್​​​ಗೆ ಕೆಎಸ್​ಆರ್​ಟಿಸಿ ಬಸ್​​ ಡಿಕ್ಕಿ: ಯುವತಿ ಸ್ಥಳದಲ್ಲೇ ಸಾವು - KSRTC Bus

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಬೈಕ್​​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಯುವತಿಯೋರ್ವಳು ಸಾವನ್ನಪ್ಪಿದ್ದು, ಮತ್ತೋರ್ವಳಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ನಡೆದಿದೆ.

ದ್ವಿಚಕ್ರವಾಹನಕ್ಕೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ
author img

By

Published : Oct 22, 2019, 5:47 PM IST

ಹಾಸನ: ದ್ವಿಚಕ್ರ ವಾಹನಕ್ಕೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಗಿರಿಜಾ (19) ಮೃತ ದುರ್ದೈವಿ. ಮೃತಳ ಸಹೋದರಿ ಚಂದ್ರಕಲಾ (22) ಎಂಬುವರು ಗಂಭೀರ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ದ್ವಿಚಕ್ರ ವಾಹನಕ್ಕೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ

ವಡ್ಡರಹಟ್ಟಿಯಿಂದ ಹಿರೀಸಾವೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ನರಿಹಳ್ಳಿ ಬಳಿ ಎದುರಿನಿಂದ ಬಂದ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಗಿರಿಜಾ ಸಾವನ್ನಪ್ಪಿದ್ದು, ಆಕೆಯ ಸಹೋದರಿ ಚಂದ್ರಕಲಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುವಿಗೆ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಾಸನ: ದ್ವಿಚಕ್ರವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಓರ್ವ ಯುವತಿ ಸಾವಿಗೀಡಾಗಿದ್ದು ಮತ್ತೋರ್ವ ಯುವತಿ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಗಿರಿಜಾ (19) ಸಾವಿಗೀಡಾದ ಮೃತ ದುರ್ದೈವಿ ಇನ್ನು ಅಕ್ಕ ಚಂದ್ರಕಲಾ (22) ಗಂಭೀರ ಗಾಯಗಳಾಗಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಯುವತಿ. ಸ್ವಗ್ರಾಮ ವಡ್ಡರಹಟ್ಟಿಯಿಂದ ಹಿರೀಸಾವೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ನರಿಹಳ್ಳಿ ಬಳಿ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಗಿರಿಜಾ ಸಾವನ್ನಪ್ಪಿದ್ದು ಇನ್ನು ಅಕ್ಕ ಚಂದ್ರಕಲಾ ಳಿಗೆ ತಲೆಗೆ ಮತ್ತು ಕೈಕಾಲುಗಳಿಗೆ ಗಂಭೀರ ಗಾಯ ಆಗಿರುವುದರಿಂದ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತದೆ. ಇನ್ನು ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.