ಕೊಡಗು: ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ದೇವರ ಕೊಲ್ಲಿ ಬಳಿ ನಡೆದಿದೆ.
ಮಂಗಳೂರು-ಮಡಿಕೇರಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಪಶ್ಚಿಮ ಬಂಗಾಳ ನೋಂದಣಿಯ ಪ್ರವಾಸಿಗರ ಬೈಕ್ ಇರಬಹುದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.