ಹೈದರಾಬಾದ್: ತೆಲಂಗಾಣದ ಹೈದರಾಬಾದ್ ಬಳಿ ಆಂಧ್ರ ಪ್ರದೇಶದ ಇಂಧನ ಸಚಿವ ಬಿ ಶ್ರೀನಿವಾಸ ರೆಡ್ಡಿ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಇಬ್ಬರು ಕಾನ್ಸ್ಟೇಬಲ್ಗಳು ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಹೆಡ್ ಕಾನ್ಸ್ಟೇಬಲ್ ಪಾಪಾ ರಾವ್ ಮೃತ ಪೊಲೀಸ್ ಸಿಬ್ಬಂದಿ. ಇಬ್ಬರು ಕಾನ್ಸ್ಟೇಬಲ್ಗಳ ಜೊತೆ ವಾಹನ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೈದರಾಬಾದ್ನ ಹಯತ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಬೆಂಗಾವಲು ವಾಹನ ಟೈರ್ ಸ್ಫೋಟದಿಂದಾಗಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಾವಲು ವಾಹನಕ್ಕೆ ಸಚಿವರಿದ್ದ ಕಾರು ಡಿಕ್ಕಿ ಹೊಡೆಯುವುದನ್ನು ಚಾಲಕ ತಕ್ಷಣ ಬ್ರೇಕ್ ಹಾಕಿ ತಡೆದಿದ್ದರಿಂದ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಡ್ ಕಾನ್ಸ್ಟೇಬಲ್ ಅವರ ನಿಧನಕ್ಕೆ ಸಚಿವರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ನೆರವಿನ ಭರವಸೆ ನೀಡಿದ್ದಾರೆ.