ETV Bharat / jagte-raho

ಗೋಸ್ವಾಮಿ ಕೇಸ್​: ರಾಯಗಢ ಪೊಲೀಸರ ಅರ್ಜಿ ವಿಚಾರಣೆ ಮುಂದೂಡಿಕೆ

ಅರ್ನಬ್ ಗೋಸ್ವಾಮಿಯನ್ನು ಪೊಲೀಸ್​ ಕಸ್ಟಡಿಗೆ ನೀಡದೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಅಲಿಬಾಗ್‌ ಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ರಾಯಗಢ ಪೊಲೀಸರು ರಾಯಗಢ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ ಈ ಅರ್ಜಿಯ ವಿಚಾರಣೆಯನ್ನು ನವೆಂಬರ್​ 9ಕ್ಕೆ ಮುಂದೂಡಿದೆ.

Arnab Goswami Case
ಗೋಸ್ವಾಮಿ ಕೇಸ್​
author img

By

Published : Nov 7, 2020, 4:07 PM IST

ರಾಯಗಢ (ಮಹಾರಾಷ್ಟ್ರ): ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಪೊಲೀಸ್​ ಕಸ್ಟಡಿಗೆ ನೀಡುವಂತೆ ಕೋರಿ ರಾಯಗಢ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

2018ರ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​​ ಆತ್ಮಹತ್ಯೆ ಪ್ರಕರಣ ಸಂಬಂಧ ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್‌ ನ್ಯಾಯಾಲಯವು ಆದೇಶ ನೀಡಿತ್ತು.

ಗೋಸ್ವಾಮಿಯನ್ನು ಪೊಲೀಸ್​ ಕಸ್ಟಡಿಗೆ ನೀಡದೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಅಲಿಬಾಗ್‌ ಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ರಾಯಗಢ ಪೊಲೀಸರು ರಾಯಗಢ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಜಿಲ್ಲಾ ನ್ಯಾಯಾಲಯವು ಈ ಅರ್ಜಿಯ ವಿಚಾರಣೆಯನ್ನು ನವೆಂಬರ್​ 9ಕ್ಕೆ ಮುಂದೂಡಿದೆ.

ಇನ್ನು ಅರ್ನಬ್ ಗೋಸ್ವಾಮಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.