ರಾಯಚೂರು: ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸುವಲ್ಲಿ ರಾಯಚೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿಂಧನೂರಿನ ಚಂಗು, ರೆಹಿಮಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಒಟ್ಟು 14.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ರಾಯಚೂರು ಉಪ ವಿಭಾಗ, ಸಿಂಧನೂರು ಉಪ ವಿಭಾಗದಲ್ಲಿ ಹಗಲು ಹಾಗೂ ರಾತ್ರಿ ವೇಳೆ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಇದನ್ನು ತಡೆಗಟ್ಟಲು ಸಿಂಧನೂರು ಹಾಗೂ ರಾಯಚೂರು ಉಪ ವಿಭಾಗ ವಿಶೇಷ ತಂಡ ರಚನೆ ಮಾಡಿ, ಖಚಿತ ಮಾಹಿತಿ ಮೇಲೆ ಖದೀಮರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.