ಚಿತ್ರದುರ್ಗ: ಲಾರಿ ಹಿಂಬದಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.
ವೆಂಕಟೇಶ್ (20) ಮೃತ. ಇವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಯವರೆಂದು ಗುರುತಿಸಲಾಗಿದೆ. ಇನ್ನೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.