ಬೀದರ್: ಅತಿ ವೇಗವಾಗಿ ಬಂದ ಟ್ರ್ಯಾಕ್ಟರ್, ಬೈಕ್ ಸವಾರನ ಮೇಲೆ ಹಾಯ್ದ ಪರಿಣಾಮ ಸ್ಥಳದಲ್ಲೇ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಔರಾದ್ ಪಟ್ಟಣದಲ್ಲಿ ನಡೆದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ರಕ್ತದ ಮಡುವಿನಲ್ಲಿದ್ದ ಗಾಯಾಳು ಅನಿಲ್ನನ್ನು ಆಸ್ಪತ್ರೆಗೆ ಸಾಗಿಸಬೇಕು ಎನ್ನುವಷ್ಟರಲ್ಲೇ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಔರಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ಧಾರೆ.