ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಬಿಹಾರ ಮೂಲದ ಯುವಕನನ್ನು ಆತನ ಸ್ನೇಹಿತನೇ ಕೊಲೆ ಮಾಡಿ ಪರಾರಿಯಾದ ಘಟನೆ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಮೃತ ಯುವಕ ಬಿಹಾರ ಮೂಲದ ಮೊಹ್ಮದ್ ನದೀಮ್ (23) ಎಂದು ಗುರುತಿಸಲಾಗಿದೆ. ಮೃತ ಯುವಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇವನ ಜೊತೆಗೆ ಬಿಹಾರ ಮೂಲದ ಭವನ ಕುಮಾರ ಎಂಬಾತನೂ ಕೆಲಸ ಮಾಡುತ್ತಿದ್ದ. ಈ ಇಬ್ಬರೂ ಒಂದೇ ರೂಂಮ್ನಲ್ಲಿ ವಾಸವಾಗಿದ್ದರು.
ಫೆಬ್ರವರಿ 16ರ ರಾತ್ರಿ ಯಾವುದೋ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಮೊಹ್ಮದ್ ನದೀಮ್ ಅವರ ತಲೆಗೆ ಭವನ ಕುಮಾರ್ ಎಂಬಾತನೇ ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದರಿಂದ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.