ಚಿಕ್ಕಮಗಳೂರು: ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಗರದ ಹೊರವಲಯದ ಮತ್ತಾವರ ಅರಣ್ಯ ಇಲಾಖೆಯ ಗೆಸ್ಟ್ ಹೌಸ್ ಬಳಿ ಈ ಅಪಘಾತ ಜರುಗಿದ್ದು, ಘಟನೆಯಲ್ಲಿ ಹಳಿಯೂರು ಗ್ರಾಮದ ನಾಗಪ್ಪಗೌಡ (55) ಸಾವನ್ನಪ್ಪಿದ್ದಾರೆ.
ಈ ಘಟನೆಯಿಂದ ನಾಗಪ್ಪಗೌಡರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು, ಆಸ್ವತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಪೊಲೀಸರು, ಘಟನೆಯ ಬಗ್ಗೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.