ಫಿರೋಜಾಬಾದ್: ಉತ್ತರ ಪ್ರದೇಶದ ಬಿಜೆಪಿ ಮುಖಂಡ ಡಿ.ಕೆ.ಗುಪ್ತಾರನ್ನು ದುಷ್ಕರ್ಮಿಗಳು ಫಿರೋಜಾಬಾದ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಗುಪ್ತಾ ಅವರು ನಿನ್ನೆ ರಾತ್ರಿ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೊರಡುತ್ತಿರುವ ವೇಳೆ ಬೈಕ್ನಲ್ಲಿ ಬಂದ ಮೂವರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕುಟುಂಬಸ್ಥರು ಗುಪ್ತಾರನ್ನು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಗುಪ್ತಾರೊಂದಿಗೆ ಈ ಹಿಂದೆ ಗಲಾಟೆ ಮಾಡಿಕೊಂಡಿದ್ದ ಕೆಲವು ಶಂಕಿತರ ಹೆಸರನ್ನು ಕುಟುಂಬ ಸದಸ್ಯರು ನೀಡಿದ್ದಾರೆ. ನಾವು ತನಿಖೆ ಚುರುಕುಗೊಳಿಸಿ, ಆರೋಪಿಗಳನ್ನು ಶೀಘ್ರದಲ್ಲೆ ಬಂಧಿಸುವುದಾಗಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಚೀಂದ್ರ ಪಟೇಲ್ ಹೇಳಿದ್ದಾರೆ.