ETV Bharat / jagte-raho

ಅರ್ನಬ್​ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್.. ​ಅಲಿಬಾಗ್​ ನ್ಯಾಯಾಲಯದ ಮೊರೆ ಹೋದ ಗೋಸ್ವಾಮಿ - ಅಲಿಬಾಗ್​ ನ್ಯಾಯಾಲಯ

ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆ ಅರ್ನಬ್ ಗೋಸ್ವಾಮಿ ಇದೀಗ ಅಲಿಬಾಗ್ ಸೆಷನ್ಸ್​ ನ್ಯಾಯಾಲಯದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.

Bombay High Court refuses to grant interim bail to Arnab Goswami
ಅರ್ನಬ್ ಗೋಸ್ವಾಮಿ
author img

By

Published : Nov 9, 2020, 3:30 PM IST

ಮುಂಬೈ: ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​​ ಆತ್ಮಹತ್ಯೆ ಮಾಡ್ಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ನವೆಂಬರ್​ 4 ರಂದು ಮುಂಬೈ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್‌ ನ್ಯಾಯಾಲಯ ಆದೇಶ ನೀಡಿತ್ತು.

ಜಾಮೀನು ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್​ಗೆ ಅರ್ನಬ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್​ ಎಸ್​ ಶಿಂಧೆ ನೇತೃತ್ವದ ನ್ಯಾಯಪೀಠವು ಅರ್ಜಿಯನ್ನು ತಿರಸ್ಕರಿಸಿದ್ದು, ಕೆಳಹಂತದ ನ್ಯಾಯಾಲಯದಲ್ಲಿ ಬೇಲ್​ ಅರ್ಜಿ ಸಲ್ಲಿಸಲು ಸಲಹೆ ನೀಡಿದೆ.

ಹೀಗಾಗಿ ಅಲಿಬಾಗ್ ಸೆಷನ್ಸ್​ ನ್ಯಾಯಾಲಯದಲ್ಲಿ ಗೋಸ್ವಾಮಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.