ಹುಬ್ಬಳ್ಳಿ: ಬಾಲಕನೊರ್ವ ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರೇಮ್ ಮೇಲಿನಮನಿ (14) ಮೃತ ಬಾಲಕನಾಗಿದ್ದು, ಈತ ಶನಿವಾರ ಶಾಲೆ ಬಿಟ್ಟ ನಂತರ ಗೆಳೆಯರೊಂದಿಗೆ ಈಜಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.