ಅಲಿಗರ್: 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯ ತಪ್ಪಲ್ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಬಲಿಯಾದವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.