ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.
ನಗರದ ಬಿ.ಹೆಚ್. ರಸ್ತೆಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೂ ಕ್ಯಾಂಟರ್ ಚಾಲಕ ಇದ್ಯಾವುದನ್ನೂ ಲೆಕ್ಕಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಗೌರಿಬಿದನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.