ಕಾರು - ಆಟೋ ಮುಖಾಮುಖಿ : ನಾಲ್ವರು ಗಂಭೀರ - ಹುಬ್ಬಳ್ಳಿ
ಕಾರು ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಕಾರು - ಆಟೋ ಮುಖಾಮುಖಿ
ಹುಬ್ಬಳ್ಳಿ: ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಧುರ ಕಾಲೋನಿ ಬಳಿ ನಡೆದಿದೆ.
ಕಾಲೋನಿ ಬಳಿ ಕ್ರಾಸ್ ಮಾಡುತ್ತಿದ್ದ ಆಟೋಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಮತ್ತು ಕಾರು ಸಂಪೂರ್ಣ ಜಖಂಗೊಂಡಿವೆ. ಘಟನೆಯಲ್ಲಿಆಟೋದಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
sample description