ಚಿಕ್ಕಮಗಳೂರು: ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮುಗಿಸಿ, ಮನೆಗೆ ಹಿಂದಿರುಗುತ್ತಿದ್ದ ವೇಳೆ, ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸಾವನಪ್ಪಿರುವ ಘಟನೆ ತಾಲೂಕಿನ ಹಿರೇಗೌಜ ಸಮೀಪ ಈ ಅಪಘಾತ ಸಂಭವಿಸಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಟಿಎಸ್ ಸಿದ್ದರಾಮಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮ್ಮ ಕರ್ತವ್ಯವನ್ನು ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ, ಈ ಅವಘಡ ಜರುಗಿದೆ.
ಈ ಭಾಗದಲ್ಲಿ ಕಳೆದ ಒಂದು ವರ್ಷದಲ್ಲಿ ಹತ್ತಾರು ಅಪಘಾತಗಳು ನಡೆದಿದ್ದರೂ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆಕ್ರೋಶವೂ ಸ್ಥಳೀಯರಿಂದ ಕೇಳಿ ಬರುತ್ತಿದೆ.
ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್