ನವದೆಹಲಿ: 1999ರ ಕಲ್ಲಿದ್ದಲು ಹಗರಣ ಸಂಬಂಧ ಇದೀಗ ಕೇಂದ್ರ ಮಾಜಿ ಸಚಿವ ದಿಲೀಪ್ ರಾಯ್ ಅಪರಾಧಿ ಎಂದು ದೆಹಲಿ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
1999ರ ಜಾರ್ಖಂಡ್ನ ಕಲ್ಲಿದ್ದಲು ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಅಂದಿನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಕಲ್ಲಿದ್ದಲು ರಾಜ್ಯ ಸಚಿವರಾಗಿದ್ದ ದಿಲೀಪ್ ರಾಯ್ ಅವರ ಪಿತೂರಿ ಇರುವುದು ಸಾಬೀತಾಗಿದೆ.
ಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭಾರತ್ ಪರಾಶರ್, ದಿಲೀಪ್ ರಾಯ್ ಜೊತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ರನ್ನು ದೋಷಿಗಳೆಂದು ಹೇಳಿದ್ದಾರೆ.
ಅಕ್ಟೋಬರ್ 14ರಂದು ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣದ ಕುರಿತು ಕೋರ್ಟ್ ವಿಚಾರಣೆ ನಡೆಸಲಿದೆ.