ಹುಬ್ಬಳ್ಳಿ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದ ಬಿಆರ್‌ಟಿಎಸ್ ಬಸ್‌ಗೆ ಹಿಂದಿನಿಂದ ಬಂದ ಇನ್ನೊಂದು ಬಸ್ ಡಿಕ್ಕಿ ಹೊಡೆದಿರೋ ಘಟನೆ ನಗರದ ಉಣಕಲ್ ಸೇತುವೆ ಬಳಿ ನಡೆದಿದೆ.
ಬಿಆರ್‌ಟಿಎಸ್ ಬಸ್‌ಗೆ ಬೈಕ್ ಸವಾರನೊಬ್ಬ ಅಡ್ಡ ಬಂದಿದ್ದ. ಬೈಕ್‌ಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿದ್ದ ಬಸ್‌ನ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಬಿಆರ್‌ಟಿಎಸ್ ಬಸ್, ಮುಂದಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಒಂದು ಬಸ್ ಮುಂಭಾಗ, ಇನ್ನೊಂದು ಬಸ್‌ನ ಹಿಂಭಾಗ ನಜ್ಜುಗುಜ್ಜಾಗಿದ್ದು, ಅವೆರಡನ್ನೂ ಮಾರ್ಗ ಮಧ್ಯೆ ನಿಲ್ಲಿಸಲಾಗಿತ್ತು. ಈ ಘಟನೆಯಿಂದಾಗಿ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.