ಮಂಗಳೂರು: ಪ್ರೇಯಸಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ವಿಡಿಯೋವನ್ನು ಪಾಗಲ್ ಪ್ರೇಮಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಆತನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಲೊರೆಟ್ಟದ ವ್ಯಕ್ತಿ ಹೀಗೆ ಮಾಡಿದಾತ ಎನ್ನಲಾಗಿದೆ.
ವ್ಯಕ್ತಿಯು ಯುವತಿ ಜೊತೆ ಸಲ್ಲಾಪವಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಸ್ಥಳೀಯರು ದೂರು ನೀಡಿದ್ದಾರೆ. ಈತ ಯುವತಿಯೊಂದಿಗೆ ಸಲ್ಲಾಪವಾಡುವ ವಿಡಿಯೋ ಚಿತ್ರೀಕರಿಸಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ ಎನ್ನಲಾಗುತ್ತಿದೆ.