ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ನನ್ನು ವಿನೋಬಾ ನಗರ ಪೊಲೀಸರು ಬಂಧಿಸಿದ್ದಾರೆ.
ಮೋದಿಯವರು ಫೋಟೋ ತೆಗೆಯುತ್ತಿದ್ದ ಚಿತ್ರವನ್ನು ತಿರುಚಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಅವರು ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನಿನ್ನೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಸಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ದೀಪಕ್ ಸಿಂಗ್ನನ್ನು ಬಂಧಿಸಿದ್ದಾರೆ.