ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಹಾಡಹಾಗಲೇ ಹಿಂಬಾಲಿಸಿ ಮಾರಣಾಂತಿಕವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದ ಗ್ಯಾಂಗ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳೆದ ಡಿ. 9ರಂದು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಏರಿಯಾವೊಂದರ ಬಳಿ ಮನೆಗೆ ಹೋಗುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ನಾಲ್ವರು ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿಕೊಂಡು ಲಾಂಗ್ನಿಂದ ರಿಯಾಜ್ ಮೇಲೆ ಮಾರಕಾಸ್ತ್ರಗಳಿಂದ ಮನ ಬಂದಂತೆ ಹಲ್ಲೆ ನಡೆಸಿದ್ದರು.
ರಿಯಾಜ್ ಈ ಹಿಂದೆ ಎಸ್ಡಿಪಿಐ ಪಕ್ಷದಲ್ಲಿ ಗುರುತಿಸಿಕೊಂಡು ಬಳಿಕ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ಗೆ ಸೇರಿ ರಿಜ್ವಾನ್ ಆರ್ಷದ್ ಬೆಂಬಲಿಗನಾಗಿದ್ದ. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ ಬಂದಿದ್ದರು. ಹಲ್ಲೆ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.