ETV Bharat / jagte-raho

ದಲಿತ ಬಾಲಕಿ ಮೇಲೆ ಗ್ಯಾಂಗ್​ ರೇಪ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕರು - ರಾಜಸ್ಥಾನದ ಸಾಮೂಹಿಕ ಅತ್ಯಾಚಾರ ಸುದ್ದಿ

ರಾಜಸ್ಥಾನದ ಜಾಲೋರ್​ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರು 4 ತಿಂಗಳ ಬಳಿಕ ಮತ್ತೆ ಆಕೆಯ ಬಳಿ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಡ ಹೇರಿದ್ದಾರೆ. ಇದಕ್ಕೆ ಆಕೆ ಒಪ್ಪದಿದ್ದಾಗ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

Rajastan gangrape case
ದಲಿತ ಬಾಲಕಿ ಮೇಲೆ ಗ್ಯಾಂಗ್​ರೇಪ್​.
author img

By

Published : Oct 23, 2020, 1:12 PM IST

ಜಾಲೋರ್ (ರಾಜಸ್ಥಾನ): ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಮೂವರು ಯುವಕರು, ಘಟನೆಯ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ನಾಲ್ಕು ತಿಂಗಳ ಹಿಂದೆ ರಾಜಸ್ಥಾನದ ಜಾಲೋರ್​ನಲ್ಲಿ ಅಪ್ರಾಪ್ತೆ ಮೇಲೆ ಕಾಮುಕರು ಅತ್ಯಾಚಾರ ನಡೆಸಿದ್ದರು. ಅಲ್ಲದೆ ಕೃತ್ಯದ ವಿಡಿಯೋ ಚಿತ್ರೀಕರಿಸಿ ಈ ವಿಚಾರವನ್ನು ಹೊರಗಡೆ ಬಾಯ್ಬಿಟ್ಟರೆ ವಿಡಿಯೋ ವೈರಲ್​ ಮಾಡುವುದಾಗಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ಭಯದಿಂದ ಸಂತ್ರಸ್ತೆ 4 ತಿಂಗಳಿನಿಂದ ವಿಚಾರವನ್ನು ಪೋಷಕರಿಗೆ ತಿಳಿಸಿರಲಿಲ್ಲ ಎನ್ನಲಾಗಿದೆ. ಆದರೆ ಮತ್ತೆ ಆಕೆಯ ಬಳಿ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಡ ಹೇರಿದ್ದು, ಇದಕ್ಕೆ ಆಕೆ ಒಪ್ಪದಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಬಳಿಕ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಸಂತ್ರಸ್ತೆಯ ದೂರಿನ ಮೇರೆಗೆ ಭದ್ರಾಜುನ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.