ನವದೆಹಲಿ: ಪೌರತ್ವ ಕಾಯ್ದೆ ವಿರೋಧಿ ಗಲಭೆ ಪ್ರಕರಣದಲ್ಲಿ ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಬಂಧಿತನಾಗಿದ್ದ ಜೆಎನ್ಯುನ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ನನ್ನು ಅಕ್ಟೋಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ಕೋರ್ಟ್ ಆದೇಶ ನೀಡಿದೆ.
ಉಮರ್ ಖಾಲಿದ್ನ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆತನನ್ನು ಇಂದು ಹೆಚ್ಚುವರಿ ಸೆಷನ್ ನ್ಯಾಯಾಲಯದ ನ್ಯಾ. ಅಮಿತಾಬ್ ರಾವತ್ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿರುವ ಕೋರ್ಟ್, ಅ.22 ವರೆಗೆ ಖಾಲಿದ್ನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಫೆಬ್ರವರಿ 24ರಂದು ಈಶಾನ್ಯ ದೆಹಲಿಯಲ್ಲಿ ನಡೆದ ಸಿಎಎ ಪರ-ವಿರೋಧಿ ಪ್ರತಿಭಟನೆ ಹಿಂಸಾರೂಪ ಪಡೆದಿತ್ತು. ಘಟನೆಯಲ್ಲಿ 53 ಮಂದಿ ಬಲಿಯಾಗಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಲ್ಲದೇ ನೂರಾರು ಪೊಲೀಸರಿಗೂ ಗಾಯಗಳಾಗಿತ್ತು. ಪ್ರಕರಣ ಸಂಬಂಧ ಸೆ.13 ರಂದು ಉಮರ್ ಖಾಲಿದ್ನನ್ನು ಪೊಲೀಸರು ಬಂಧಿಸಿದ್ದರು.
ಇನ್ನು ಆರೋಪಿ ಉಮರ್ ಖಾಲಿದ್ವಿರುದ್ಧ ದೇಶದ್ರೋಹ, ಕೊಲೆ, ಕೊಲೆಗೆ ಯತ್ನ, ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧಗಳ ಅಡಿಯಲ್ಲಿ ಕೂಡ ಪ್ರಕರಣಗಳು ದಾಖಲಾಗಿದೆ.