ಶಿವಮೊಗ್ಗ: ಭದ್ರಾವತಿಯ ಹಳೇ ನಗರ ಹಾಗೂ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 2 ಲಕ್ಷದ 48 ಸಾವಿರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನದಲ್ಲಿ 40 ಗ್ರಾಂ ತೂಕದ 1 ಲಕ್ಷದ 20 ಸಾವಿರ ರೂ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಪ್ರಕರಣವನ್ನು ಭೇದಿಸಿದ ಭದ್ರಾವತಿ ಹಳೆನಗರ ಪೊಲೀಸರು ಭದ್ರಾವತಿಯ ಲೋಯರ್ ಹುತ್ತಾ ನಿವಾಸಿ ವೆಂಕಟೇಶ್ನನ್ನು ಬಂಧಿಸಿ ಆತನಿಂದ 40 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೂ ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತಡಗಣಿ ಗ್ರಾಮದಲ್ಲಿ ಮನೆಗಳ್ಳತನ ನಡೆದಿತ್ತು. ಮನೆಯಲ್ಲಿದ್ದ 45.10 ಗ್ರಾಂ ಚಿನ್ನಾಭರಣ ಕಳ್ಳತನವಾಗಿತ್ತು. ಪ್ರಕರಣದಲ್ಲಿ ಹಾವೇರಿ ಜಿಲ್ಲೆ ಮತ್ತಿಹಳ್ಳಿ ಗ್ರಾಮದ ಬಸವರಾಜ್(41) ನನ್ನು ಬಂಧಿಸಿ ಆತನಿಂದ 45.10 ಗ್ರಾಂ ತೂಕ 1.28 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಹಳೆ ನಗರ ಹಾಗೂ ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಅಭಿನಂದನೆ ಸಲ್ಲಿಸಿದ್ದಾರೆ.