ಕೊಚ್ಚಿ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳ ಖಾತೆಯಲ್ಲಿ ದೊರೆತ 1.85 ಕೋಟಿ ರೂಪಾಯಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ.
ಪ್ರಕರಣ ಸಂಬಂಧ ಮನಿ ಲಾಂಡರಿಂಗ್ ( ಅಕ್ರಮ ಹಣ ವರ್ಗಾವಣೆ) ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧನವಾಗಿರುವ ಸ್ವಪ್ನಾ ಸುರೇಶ್, ಸರಿತ್ ಪಿಎಸ್ ಮತ್ತು ಸಂದೀಪ್ ನಾಯರ್ರಿಂದ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಅಮಾನತುಗೊಂಡು ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರ ಎಲ್ಲ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಂಡಿರುವುದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ತನಿಖಾ ಸಂಸ್ಥೆಯಿಂದ ಅರೆಸ್ಟ್ ಆದ ಕೇರಳದ ಮೊದಲ IAS ಅಧಿಕಾರಿ ಶಿವಶಂಕರ್
ಜುಲೈ 5 ರಂದು ತಿರುವನಂತಪುರಂನಲ್ಲಿ 14.82 ಕೋಟಿ ರೂ. ಮೌಲ್ಯದ 30 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.