ETV Bharat / jagte-raho

ಉಡುಪಿಯಲ್ಲಿ ವಿದ್ಯಾರ್ಥಿಗಳ ಹಣ, ಮೊಬೈಲ್​ ಸುಲಿಗೆ: ಇಬ್ಬರ ಬಂಧನ

author img

By

Published : Feb 9, 2021, 4:11 AM IST

ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಟಿಪ್ಪು ನಗರದ ಆಸಿಫ್ ಮತ್ತು ದಸ್ತಾಗೀರ್ ಬೇಗ್ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿಯ ವೇಳೆ ಸಕ್ರಿಯರಾಗುತ್ತಿದ್ದ ಈ ಯುವಕರು ಮಣಿಪಾಲದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ನಗದು ಹಾಗೂ ಮೊಬೈಲ್ ದರೋಡೆ ಮಾಡುತ್ತಿದ್ದರು.

Accused
Accused

ಉಡುಪಿ: ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿಗೆ ಮಣಿಪಾಲದ ಕೆಎಫ್​ಸಿ ಕಟ್ಟಡದ ಬಳಿ ಮಾತನಾಡುತ್ತಾ ನಿಂತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ನೋಡಿ, ಸಿಗರೇಟ್ ಕೇಳುವ ನೆಪದಲ್ಲಿ ವಿದ್ಯಾರ್ಥಿನಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿದ್ದರು. ಅವರ ಬಳಿ ಇದ್ದ ಮೊಬೈಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು.

ಇದನ್ನೂ ಓದಿ: ಇದ್ಯಾಕೋ ಅತಿಯಾಯ್ತು.. ಚಲಿಸುವ ಕಾರಿನಲ್ಲಿಯೇ ಯುವಕರ ಹುಚ್ಚಾಟ : ವಿಡಿಯೋ

ತ್ವರಿತ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಘಟನೆ ಒಂದೇ ವಾರದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.