ಕೋಲಾರ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣರಾದ ಹಿನ್ನಲೆ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಗಾರಪೇಟೆ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಕಾಂತ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂಗ್ಲ ಭಾಷೆಯಲ್ಲಿ ಫೇಲ್ ಆದ ಹಿನ್ನಲೆಯಲ್ಲಿ ಮನನೊಂದು ನೇಣಿಗೆ ಕೊರಳೊಡ್ಡಿದ್ದಾಳೆ ಎಂದು ತಿಳಿದುಬಂದಿದೆ.
ಅದರಂತೆ ಕೋಲಾರ ತಾಲೂಕಿನ ಬೆಳ್ಳೂರು ಗ್ರಾಮದ ಆದಿತ್ಯ ಎಂಬ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ಬೆಳ್ಳೂರಿನ ರಮಾಮಣಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರ ಹೊಮ್ಮಿದ್ದ. ಇದೀಗ ಪಿಯುಸಿಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನೂ ಸಹ ಆಂಗ್ಲ ಭಾಷೆಯಲ್ಲಿ ಫೇಲ್ ಆಗಿದ್ದ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಮಸಮುದ್ರ ಪೊಲೀಸ್ ಠಾಣೆ ಹಾಗೂ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಘಟನೆಗಳು ನಡೆದಿವೆ. ಮೃತ ವಿದ್ಯಾರ್ಥಿಗಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.