ಬೆಂಗಳೂರು:ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ರೋಗಿಗಳಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ನಗರ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಸಮೀರ್ ಉಲ್ಲಾ ಬಂಧಿತ ಆರೋಪಿ. ವಿಕ್ಟೋರಿಯಾ ಆಸ್ಪತ್ರೆ ಬಳಿ ಸೋಂಕು ಪರೀಕ್ಷೆ ಮಾಡಿಸೋಕೆ ಜನ ಕ್ಯೂ ನಿಂತಿದ್ದಾರೆ. ಈ ಮೂಲಕ ವೈದ್ಯರಿಗೆ ತೊಂದರೆಯಾಗುತ್ತಿದೆ ಎಂದು ಈತ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ.
ಈ ಬಗ್ಗೆ ಪರಿಶೀಲನೆ ನಡೆಸಿದ ಸಿಸಿಬಿ ಅಧಿಕಾರಿಗಳಿಗೆ ವಿಡಿಯೋದಲ್ಲಿರುವುದು ವಿಕ್ಟೋರಿಯಾ ಆಸ್ಪತ್ರೆಯಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಆರೋಪಿಯನ್ನು ಬಂಧಿಸಿ ಐಟಿ ಕಾಯ್ದೆ ಹಾಗೂ ಎನ್‌ಡಿಎಂಎ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.